ಬೆಂಗಳೂರು: ನಗರದ ಟೌನ್ಹಾಲ್ ಮುಂಭಾಗ ನಡೆದ ಭೀಕರ ಲಾರಿ ಅಪಘಾತದಲ್ಲಿ ವಿಜಯವಾಣಿಯ ಮುಖ್ಯ ಉಪ ಸಂಪಾದಕರಾದ ಎಸ್.ಎಸ್ ಗಂಗಾಧರ ಮೂರ್ತಿಯವರು (49) ನಿಧನರಾಗಿದ್ದಾರೆ. ಮೃತರು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಇಂದು ಮಧ್ಯಾಹ್ನ ಎಸ್.ಎಸ್ ಗಂಗಾಧರ ಮೂರ್ತಿಯವರು ಬೈಕ್ನಲ್ಲಿ ಚಾಮರಾಜಪೇಟೆಯಲ್ಲಿರುವ ವಿಜಯವಾಣಿ ಕಚೇರಿಗೆ ಬರುತ್ತಿದ್ದಾಗ, ಟೌನ್ ಹಾಲ್ ಬಳಿ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ಡಿಕ್ಕಿ ಹೊಡೆದು ಬಿದ್ದಿದೆ.
ಈಗ ಲಾರಿ ಅಡಿಯಲ್ಲಿ ಸಿಲುಕಿದ ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗದೆ ಕೊನೆಯುಸಿರೆಳೆದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





