Breaking News

ಸಚಿವರಾಗಬೇಕು ಎಂಬುದು ಹಲವು ಹಿರಿಯ ಶಾಸಕರ ಸಹಜವಾದ ಆಶಯ : ಈಶ್ವರಪ್ಪ

ಶಿವಮೊಗ್ಗ: ಸಂಪುಟ ವಿಸ್ತರಣೆ ಆಗಬೇಕಾಗಿರುವುದು ಸ್ವಾಭಾವಿಕ. ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇದೆ. ಹಾಗಾಗಿ ಸಂಪುಟ ವಿಸ್ತರಣೆ ಅಗತ್ಯವಿದೆ. ಸಚಿವರಾಗಬೇಕು ಎಂಬುದು ಹಲವು ಹಿರಿಯ ಶಾಸಕರ ಸಹಜವಾದ ಆಶಯ. ಅದರಲ್ಲಿ ತಪ್ಪಿಲ್ಲ. ಯಾರಿಗೆ ಸ್ಥಾನ ನೀಡಬೇಕು ಎಂಬುದು ವರಿಷ್ಠರ ತೀರ್ಮಾನ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಖಾಲಿ ಇರುವ ನಾಲ್ಕು ಸ್ಥಾನವನ್ನು ಯಾರಿಗೆ ನೀಡಿದರೆ ಉತ್ತಮ ಎಂಬುದನ್ನು ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ. ಸದ್ಯಕ್ಕೆ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನ ಖಾಲಿ ಇಲ್ಲ. ರಾಜ್ಯ ಘಟಕದ ಅಧ್ಯಕ್ಷರು ಬದಲಾಗುತ್ತಾರೆ ಎಂಬುದು ಕೇವಲ ವದಂತಿ ಎಂದು ಹೇಳಿದರು.

Share News

About admin

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *