Breaking News

ರಾಷ್ಟ್ರಗೀತೆಗೆ ಅವಮಾನ ಮಾಡಿದ ಮಾಜಿ ನಾಯಕ



ಕೇಪ್‌ಟೌನ್:ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಯ ಮೂರನೇ ಹಾಗೂ ಅಂತಿಮ ಹಣಾಹಣಿ ಆರಂಭಕ್ಕೂ ಮುನ್ನ ಇಂಥದ್ದೊಂದು ಘಟನೆ ನಡೆದಿದೆ. ಪಂದ್ಯದ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡುತ್ತಿದ್ದಾಗ ವಿರಾಟ್‌ ಕೊಹ್ಲಿ ಚೂಯಿಂಗ್‌ ಗಮ್‌ ಜಗಿಯುತ್ತಾ ನಿಂತ್ತಿದ್ದರು.  ಕೇಪ್‌ಟೌನ್‌ನ ನ್ಯೂಲೆಂಡ್ಸ್‌ ಕ್ರೀಡಾಂಗಣದಲ್ಲಿ ಭಾನುವಾರ ಕ್ರಿಕೆಟ್‌ ಪಂದ್ಯದ ವೇಳೆ ರಾಷ್ಟ್ರಗೀತೆಗೆ ಅವಮಾನ ಮಾಡಿದ ಮಾಜಿ ನಾಯಕ ವಿರಾಟ್‌ ಕೊಹ್ಲಿ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇವರೀಗ ಭಾರಿ ಟ್ರೋಲ್‌ ಆಗುತ್ತಿದ್ದಾರೆ.

ಒಡಿಐ ತಂಡದ ನಾಯಕತ್ವ ಕಳೆದುಕೊಂಡ ಕಾರಣ ಭಾರತ ತಂಡದ ಸಾಲಿನಲ್ಲಿ ಮೊದಲಿಗನಾಗಿ ವಿರಾಟ್‌ ಕೊಹ್ಲಿ ನಿಂತಿರಲಿಲ್ಲ. ಆದರೆ ರಾಷ್ಟ್ರಗೀತೆ ಆರಂಭವಾದ ಬಳಿಕ ಕ್ಯಾಮೆರಾ ಇವರ ಕಡೆಗೆ ಫೋಕಸ್‌ ಆಗಿತ್ತು. ಇದು ನೇರ ಪ್ರಸಾರದಲ್ಲಿ ಕಂಡುಬಂದಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *