ಹುಬ್ಬಳ್ಳಿ: ಮಾಜಿ ಅಧ್ಯಕ್ಷ ನಾಗನಗೌಡ ಕೋಟಿಗೌಡರ ವಿರುದ್ಧ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣ ದೂರು ನೀಡಲು ಠಾಣೆಗೆ ಹೋದಾಗ ಪಿಎಸ್‌ಐ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದ್ದು, ಮನನೊಂದ ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕುಟುಂಬಸ್ಥರು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಮೂವರಿಗೆ ಹುಬ್ಬಳ್ಳಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತರ್ಲಘಟ್ಟ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದೆ ಅಂತ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣ, ಮಾಜಿ ಅಧ್ಯಕ್ಷ ನಾಗನಗೌಡ ಕೋಟಿಗೌಡರ ವಿರುದ್ಧ ದೂರು ನೀಡಿದ್ದರು. ಸಿದ್ದಪ್ಪ ನೀಡಿದ ದೂರಿನಿಂದ ಹಲವು ಬಾರಿ ನೋಟಿಸ್ ಬಂದಿತ್ತು. ಈ ವಿಚಾರಕ್ಕೆ ಸಿದ್ದಪ್ಪ ಮತ್ತು ನಾಗನಗೌಡ ಗುಂಪುಗಳ ನಡುವೆ ಪರಸ್ಪರ ಜಗಳ ನಡೆದಿತ್ತು. ಗಲಾಟೆ ಸಂಬಂಧ ಸಿದ್ದಪ್ಪ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದರು. 4 ಬಾರಿ ಠಾಣೆಗೆ ಹೋದರೂ ದೂರು ದಾಖಲಿಸದೆ ಸಿದ್ದಪ್ಪ ಮೇಲೆ ಪಿಎಸ್‌ಐ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಹೀಗಾಗಿ ಸಿದ್ದಪ್ಪ ಕಳಸಣ್ಣ, ಅವರ ಪುತ್ರ ಬಸವರಾಜ, ಯಲ್ಲಪ್ಪ ಕಳಸಣ್ಣನವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

