Breaking News

ಒಂದು ವರ್ಷದೊಳಗೆ ಪೊಲೀಸ್ ಕಚೇರಿ ನಿರ್ಮಾಣ : ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ



ಕುಷ್ಟಗಿ: ‘ಪಟ್ಟಣದಲ್ಲಿ ಹೊಸ ಮಾದರಿಯಲ್ಲಿ ನಿರ್ಮಾಣಗೊಳ್ಳಲಿರುವ ಪೊಲೀಸ್ ಕಚೇರಿ ಕಟ್ಟಡ ಕಾಮಗಾರಿ ಆರಂಭಗೊಂಡ ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ’ ಎಂದು ಗಂಗಾವತಿ ಉಪ ವಿಭಾಗದ ಡಿವೈಎಸ್‌ಪಿ ರುದ್ರೇಶ ಉಜ್ಜನಕೊಪ್ಪ ಹೇಳಿದರು.

ಇಲ್ಲಿನ ಹೊಸ ಕಟ್ಟಡ ನಿರ್ಮಾಣಗೊ ಳ್ಳಲಿರುವುದರಿಂದ ತಾತ್ಕಾಲಿಕ ಸಿಪಿಐ ಕಚೇರಿ ಉದ್ಘಾಟನೆ ವೇಳೆ ಮಾತನಾಡಿದರು.

‘ಹೊಸ ಕಟ್ಟಡ ಕಾಮಗಾರಿ ಶೀಘ್ರದಲ್ಲಿಯೇ ಪ್ರಾರಂಭಗೊಳ್ಳಲಿದೆ. ಪೊಲೀಸ್‌ ಠಾಣೆ, ಸರ್ಕಲ್‌ ಇನ್‌ಸ್ಪೆಕ್ಟರ್‌ ಕಚೇರಿ ಹಾಗೂ ಸಭಾಂಗಣಗಳನ್ನು ಒಳಗೊಳ್ಳಲಿದೆ. ಇದರಿಂದ ಎಲ್ಲ ಸಿಬ್ಬಂದಿ ಒಂದೇ ಕಡೆ ಕಾರ್ಯ ನಿರ್ವಹಿಸುವುದಕ್ಕೆ ಅನುಕೂಲವಾಗುತ್ತದೆ’ ಎಂದು ಅವರು ಹೇಳಿದರು.

ಪುರಸಭೆ ಅಧ್ಯಕ್ಷ ಜಿ.ಕೆ.ಹಿರೇಮಠ ತಾತ್ಕಾಲಿಕ ಕಟ್ಟಡ ಉದ್ಘಾಟಿಸಿದರು.ಸರ್ಕಲ್‌ ಇನ್‌ಸ್ಪೆಕ್ಟರ್ ಎನ್‌.ಆರ್‌.ನಿಂಗಪ್ಪ, ಸಬ್‌ ಇನ್‌ಸ್ಪೆಕ್ಟರ್ ತಿಮ್ಮಣ್ಣ ನಾಯಕ, ವೈಶಾಲಿ ಝಳಕಿ ಮತ್ತು ಪೊಲೀಸ್‌ ಸಿಬ್ಬಂದಿ, ಪುರಸಭೆಯ ಅನೇಕ ಸದಸ್ಯರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *