ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆ ಬಳಿ ನಡೆದಿದೆ.
ಲಕ್ಷ್ಮಿದೇವಿ ನಗರ ನಿವಾಸಿ ಸುರೇಶ್ ಬಾಬು(45)ಮೃತ ದುರ್ದೈವಿ. ವೇಗವಾಗಿ ಬಂದ ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಡಿಕ್ಕಿಯಾಗಿದೆ.ಘಟನೆಯಲ್ಲಿ ಹೆಲ್ಮೆಟ್ ಧರಿಸದೆ ಇದ್ದ ಕಾರಣ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಲ್ಲೇಶ್ವರಂ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಎಂಟಿಸಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

