Breaking News

ಮಕ್ಕಳಿಗೆ ಭಾದಿಸುತ್ತೀರುವ ಕೊರೋನಾ : 9 ದಿನ ಶಾಲೆ ಬಂದ್

ಕೊಪ್ಪಳ: ಕೊರೊನಾ ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ಆತಂಕದ ಮಧ್ಯೆ ಪಾಲಕರು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ಸೋಂಕು ನಿವಾರಣೆಗೆ ಹಗಲಿರುಳು ಶ್ರಮಿಸುತ್ತಿದ್ದರೂ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ.

ಕೊಪ್ಪಳ ಜಿಲ್ಲೆಯಲ್ಲಿ ಒಂದೇ ದಿನ 73 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ. ಜಿಲ್ಲೆಯ ವಿವಿಧ ಶಾಲೆಗಳಲ್ಲಿ 73 ವಿದ್ಯಾರ್ಥಿಗಳು, 6 ಶಿಕ್ಷಕರು ಹಾಗೂ ಒಬ್ಬ ಅಡುಗೆ ಸಹಾಯಕರಿಗೆ ಸೋಂಕು ದೃಢ ಪಟ್ಟಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತವು 9 ಶಾಲೆಗಳಿಗೆ ರಜೆ ನೀಡಿದೆ.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಆಚಾರ್ ನರಸಾಪುರ ಹಿರಿಯ ಪ್ರಾಥಮಿಕ ಶಾಲೆ, ಮರಳಿ ಹಿರಿಯ ಪ್ರಾಥಮಿಕ ಶಾಲೆ, ಕೊಪ್ಪಳ ತಾಲೂಕಿನ ಶಿವಪುರ ಹಿರಿಯ ಪ್ರಾಥಮಿಕ ಶಾಲೆ, ಕುಷ್ಟಗಿ ತಾಲೂಕಿನ ಹನುಮಸಾಗರ ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಕುಷ್ಟಗಿ ಪಟ್ಟಣದ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ, ಚಳಗೆರಿ ಪ್ರೌಢಶಾಲೆ, ತಳಕಲ್ ಗ್ರಾಮದ ಆರ್‌ಎಂಎಸ್‌ಎ ವಸತಿ ಶಾಲೆ, ಮಂಗಳೂರಿನ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸೋಂಕು ಕಾಣಿಸಿಕೊಂಡಿದೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *