Breaking News

ಆರ್ಥಿಕ ನಷ್ಟ: ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ


ಶಿವಮೊಗ್ಗ :ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರಕಾಶ್ ಟ್ರಾವೆಲ್ಸ್ ಮಾಲೀಕರಾಗಿದ್ದ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಲಾಕ್ ಡೌನ್ ನಿಂದಾಗಿ ವ್ಯವಹಾರದಲ್ಲಿ ಉಂಟಾದ ನಷ್ಟದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಅರ ಮೃತ ದೇಹ ಪತ್ತೆಯಾಗಿದೆ.

ಜನವರಿ 21ರ ಸಂಜೆ ನಿಗೂಢವಾಗಿ ನಾಪತ್ತೆಯಾಗಿದ್ದ ಅವರ ಕಾರು, ಮೊಬೈಲ್ ಫೋನ್ ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿತ್ತು. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪೊಲೀಸ್​ ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ. ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *