Breaking News

ಲಾರಿ ಪಲ್ಟಿ: ಸ್ಥಳದಲ್ಲೇ ಮೂವರು ಸಾವು



ಹಾವೇರಿ : ಮೆಕ್ಕೆಜೋಳದ ಚೀಲಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವುಪ್ಪಿರುವ ಘಟನೆ ತಾಲೂಕಿನ ಹೊಸರಿತ್ತಿ ಬಳಿಯ ಕೊರಡೂರು ಗ್ರಾಮದ ಹತ್ತಿರ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಮೃತರನ್ನ ಹಾವೇರಿ ತಾಲೂಕಿನ ಇಚ್ಚಂಗಿ ಗ್ರಾಮದ ಮಂಜುನಾಥ(33), ಮಂಜುನಾಥ (35) ಮತ್ತು ಆನಂದ (37) ಎಂದು ಗುರುತಿಸಲಾಗಿದೆ. ಮೆಕ್ಕೆಜೋಳದ ಚೀಲ ಲೋಡ್ ಮಾಡಿಕೊಂಡು ಹೊಸರಿತ್ತಿ ಗ್ರಾಮದ ಕಡೆಗೆ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿದೆ.

ಲಾರಿ ಕೆಳಗೆ‌ ಸಿಲುಕಿಕೊಂಡು ಈ ಮೂವರು ಹಮಾಲರು ದುರಂತ ಅಂತ್ಯ ಕಂಡಿದ್ದಾರೆ. ಮೂವರ ಮೃತದೇಹಗಳನ್ನ ಸ್ಥಳೀಯರು ಹಾಗೂ ಪೊಲೀಸರು ಹೊರತಗೆದಿದ್ದಾರೆ. ಸ್ಥಳಕ್ಕೆ ಗುತ್ತಲ ಪಿಎಸ್‌ಐ ಜಗದೀಶ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *