ಬೆಂಗಳೂರು: ಹೈಕೋರ್ಟ್‌ನ ಆದೇಶದ
ಹಿನ್ನೆಲೆಯಲ್ಲಿ ಪದವಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕನ್ನಡ ಭಾಷೆ ಕಲಿಕೆ ಕಡ್ಡಾಯ ಎಂಬ ನಿಯಮವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ.
ಪದವಿಯಲ್ಲಿ ಕಲಿಯುತಿರುವ ವಿದ್ಯಾರ್ಥಿಗಳು ಕನ್ನಡವನ್ನು ಒಂದು ಭಾಷೆಯಾಗಿ ಕಲಿಯಲು ಇಚ್ಚಿಸದಿದ್ದರೆ ನ್ಯಾಯಾಲಯದ ಅಂತಿಮ ಆದೇಶವಾಗುವವರೆಗೂ ಅದನ್ನು ಕಡ್ಡಾಯಗೊಳಿಸದಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಇನ್ನು ಆಗಸ್ಟ್ 7, 2021ರ ತನ್ನ ಆದೇಶದಲ್ಲಿ ರಾಜ್ಯದಲ್ಲಿ ಪದವಿ ಮಾಡುವ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಕಾ ಭಾಷೆಯಾಗಿ ಆಯ್ಕೆ ಮಾಡುವಂತೆ ತಿಳಿಸಿತ್ತು.ಆದರೆ ಸಂಸ್ಕೃತ ಭಾರತಿ ಟ್ರಸ್ಟ್ ಮತ್ತು ಇತರ ಸಂಘಟನೆಗಳು ಹಾಗೂ ಕೆಲ ವಿದ್ಯಾರ್ಥಿಗಳು ಸರ್ಕಾರದ ಈ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.ಇದೀಗ ಹೈಕೋರ್ಟ್‌ನ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪಿಯುಸಿ ಹಂತದಲ್ಲಿ ಕನ್ನಡ ಅಭ್ಯಾಸ ಮಾಡದ ವಿದ್ಯಾರ್ಥಿಗಳು ಹಾಗೂ ಹೊರ ರಾಜ್ಯ, ಹೊರ ದೇಶದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಡ್ಡಾಯ ಕಡ್ಡಾಯ ಕಲಿಕೆಯನ್ನು ಕೈಬಿಟ್ಟಿದೆ ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

