Breaking News

ಗಣರಾಜ್ಯೋತ್ಸವ : ಇಂದು ಸಂಜೆ ರಾಷ್ಟ್ರಪತಿ ಭಾಷಣ


ನವದೆಹಲಿ: ನಾಳೆ ಜ. 26 ರಂದು ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಸಂಜೆ 7 ಗಂಟೆಗೆ ಆಕಾಶವಾಣಿ ಮತ್ತು ದೂರದರ್ಶನದ ಎಲ್ಲ ವಾಹಿನಿಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ನೇರ ಪ್ರಸಾರವಾಗುತ್ತದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ ಭಾಷಣವನ್ನು ದೂರದರ್ಶನದ ಎಲ್ಲ ಪ್ರಾದೇಶಿಕ ಚಾನೆಲ್‌ಗಳಲ್ಲಿ ಭಾಷಣದ ನಂತರ ಅನುವಾದ ಪ್ರಸಾರವಾಗಲಿದೆ. ಆಕಾಶವಾಣಿ ರಾತ್ರಿ 9.30ಕ್ಕೆ ಪ್ರಾದೇಶಿಕ ಭಾಷೆಗಳಲ್ಲಿ ರಾಷ್ಟ್ರಪತಿ ಭಾಷಣವನ್ನು ಪ್ರಸಾರ ಮಾಡಲಿದೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *