ಬೆಂಗಳೂರು : ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ . ಸಿದ್ದರಾಮಯ್ಯ ಅವರು ಯಾರನ್ನೂ ವಾಪಸ್ ತೆಗೆದುಕೊಳ್ಳುವುದಿಲ್ಲ ಅಂತ ಅಧಿವೇಶನದಲ್ಲಿ ಹೇಳಿದ್ದರು. ಈಗ ಯಾಕೆ ನಮ್ಮವರು ಬೇಕು ಅಂತಾರೆ ಎಂದು ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ
ಪ್ರಶ್ನಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಬಿಡುವಾಗ 36 ಜನ ನನ್ನ ಜೊತೆ ಇದ್ದರು.ಅದರಲ್ಲಿ 17 ಜನ ಮಾತ್ರ ಬಿಜೆಪಿಗೆ ಬಂದೆವು.ಉಳಿದವರೂ ನಮ್ಮ ಜೊತೆ ಇದ್ದಾರೆ ಎಂದು ಹೇಳಿದ್ದಾರೆ.
ದಯವಿಟ್ಟು ಸಿದ್ದರಾಮಯ್ಯ ಹಾಗೆಲ್ಲ ಮಾತಾಡಬಾರದು. 19 ಜನ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಅದರಲ್ಲಿ 3 ಮಂದಿ ಜೆಡಿಎಸ್ ಅವರು. ಅವರನ್ನ ನಾವು ಮುಟ್ಟುವುದಿಲ್ಲ.16 ಮಂದಿ ಕಾಂಗ್ರೆಸ್ ಶಾಸಕರು ನನ್ನ ಜೊತೆ ಇದ್ದಾರೆ. ಹಿಂದೆ ಹೇಳಿದ್ದ ಜಿಲ್ಲೆಯ ಕಾಂಗ್ರೆಸ್ ಶಾಸಕರು ನಮ್ಮ ಜೊತೆ ಇದ್ದಾರೆ.ಅದರಲ್ಲಿ ನಮ್ಮ ಜಿಲ್ಲೆ ಇಬ್ಬರು ಇದ್ದಾರೆ.ಮೂರನೇ ಅವರು ಬರುವವರು ಇದ್ದಾರೆ. ಅವರನ್ನು ನಾನು ತೆಗೆದುಕೊಳ್ಳುವುದಿಲ್ಲ. ಅವರು ಬಿಜೆಪಿಗೆ ಬಂದರೆ ನಾನು ಬೇರೆ ಕಡೆ ಹೋಗುತ್ತೇನೆ ಎಂದು ಸಿದ್ದರಾಮಯ್ಯ ಅವರಿಗೆ ನೇರವಾಗಿ ಮತ್ತು ಪರೋಕ್ಷವಾಗಿ ಬಿಜೆಪಿಗೆ ಸವಾಲು ಹಾಕಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

