ಹೈದರಾಬಾದ್: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮೆಗಾಸ್ಟಾರ್ ಚಿರಂಜೀವಿ ಅವರು, ಕಳೆದ ರಾತ್ರಿ ಕೊರೋನಾ ಗುಣಲಕ್ಷಣಗಳನ್ನು ಸಣ್ಣ ಪ್ರಮಾಣದಲ್ಲಿ ಹೊಂದಿತ್ತ ತಾವು ಪರೀಕ್ಷೆಗೆ ಒಳಪಟ್ಟಿದ್ದೆ. ಕೋವಿಡ್ ಪರೀಕ್ಷೆಯಲ್ಲಿ ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿ, ಚಿಕಿತ್ಸೆ ಪಡೆಯುತ್ತಿದ್ದೇನೆ. ತನ್ನ ಸಂಪರ್ಕದಲ್ಲಿದ್ದಂತ ಎಲ್ಲರೂ ಕೊರೋನಾ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

