ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹೊಸದಾಗಿ 300 ಬಸ್‌ಗಳ ಖರೀದಿಗೆ ಸಿದ್ಧತೆ ನಡೆಸಿದ್ದು, ಕೋವಿಡ್-19 ಸೋಂಕಿನಿಂದ ಇತ್ತೀಚಿನ ವರ್ಷಗಳಲ್ಲಿ ಹೊಸ ಬಸ್ ಖರೀದಿಯನ್ನು ಮುಂದೂಡುತ್ತಲೇ ಬಂದಿರುವ ಕಾರಣ ಇದೀಗ ಖರೀದಿಸಲು ಮುಂದಾಗಿದೆ.
1800 ನೂತನ ಬಸ್ ಚಾಲಕ, ನಿರ್ವಾಹಕ ಹಾಗೂ ತಾಂತ್ರಿಕ ಸಿಬ್ಬಂದಿಯ ನೇಮಕಾತಿಗೂ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದರು.
ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಹಾಗೂ ವಿಜಯಪುರ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಪ್ರಸ್ತುತ 4531 ಬಸ್‌ಗಳಿವೆ. 12900 ಚಾಲಕ, ನಿರ್ವಾಹಕರು ಇದ್ದಾರೆ. ಪ್ರತಿ ತಿಂಗಳು ಕೆಲವರು ನಿವೃತ್ತಿ, ಇನ್ನು ಕೆಲವರು ನಿಧನರಾಗಿದ್ದರಿಂದ ಹೊಸದಾಗಿ ಸಿಬ್ಬಂದಿ ನೇಮಕಾತಿ ಮಾಡಲು ನಿರ್ಧರಿಸಲಾಗಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

