Breaking News

ಕರಾವಳಿ ಭಾಗದ ಭಗೀರಥ ಗೆ ಪದ್ಮಶ್ರೀ ಪ್ರಶಸ್ತಿ

ಮಂಗಳೂರು: ‘ಬಂಟ್ವಾಳ ತಾಲ್ಲೂಕಿನ ಅಡ್ಯನಡ್ಕ ಸಮೀಪದ ಅಮೈ ಮಹಾಲಿಂಗ ನಾಯ್ಕ (76 ವರ್ಷ) ಕರಾವಳಿ ಭಾಗದ ಭಗೀರಥ’ ಎಂದೇ ಖ್ಯಾತಿ ಗಳಿಸಿರುವ ಅವರು ಕೃಷಿ ಕ್ಷೇತ್ರದ ಸಾಧನೆಗಾಗಿ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್‌ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಬಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು, ಇದೇ ವ್ಯವಸ್ಥೆಯಲ್ಲಿ ವಿದ್ಯುತ್‌ ರಹಿತವಾಗಿ ಗುರುತ್ವಾಕರ್ಷಣೆಯ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಹನಿ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿರುವ ಅವರು, ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದು ‘ಆಧುನಿಕ ಭಗೀರಥ’ ಎನಿಸಿಕೊಂಡಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *