ಶಿವಮೊಗ್ಗ: ಖ್ಯಾತ ಗಮಕ ಕಲಾವಿದರಾದ ಹೆಚ್.ಆರ್.ಕೇಶವಮೂರ್ತಿ ಅವರಿಗೆ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಕಳೆದ ಹಲವಾರು ದಶಕಗಳಿಂದ ಹೆಚ್.ಆರ್.ಕೇಶವಮೂರ್ತಿ ಅವರು ನಿರಂತರವಾಗಿ ಗಮಕ ಕಾರ್ಯಕ್ರಮಗಳ ಮೂಲಕ ಮಾಡಿರುವ ಸಾಧನೆಯನ್ನು ಗುರುತಿಸಿ ಭಾರತ ಸರ್ಕಾರ ಪದ್ಮಶ್ರೀ ನೀಡಿ ಗೌರವಿಸಿದೆ.
ಹೆಚ್.ಆರ್.ಕೇಶವಮೂರ್ತಿ ಅವರದು ಶಿವಮೊಗ್ಗ ಸಮೀಪದ ಮತ್ತೂರು ಹೊಸಳ್ಳಿ. ರಾಮಸ್ವಾಮಿ ಶಾಸ್ತ್ರಿ-ಲಕ್ಷ್ಮೀದೇವಮ್ಮ ದಂಪತಿ ಪುತ್ರ. 22 ಫೆಬ್ರವರಿ 1934ರಲ್ಲಿ ಜನಿಸಿದ್ದ ಅವರು ಬಾಲ್ಯದಿಂದಲೇ ಗಮಕ ಕಲೆ ಕರಗತ ಮಾಡಿಕೊಂಡಿದ್ದರು. ತಂದೆ, ತಾಯಿ ರಾಗವಾಗಿ ಹಾಡುತ್ತಿದ್ದ ಪುರಾಣಗಳಿಂದ ಉತ್ತೇಜಿತರಾದ ಅವರು 16ನೇ ವಯಸ್ಸಿನಲ್ಲೇ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನ ಆರಂಭಿಸಿದ್ದರು. ರಾಮಾಯಣ, ಮಹಾಭಾರತ, ಕನ್ನಡ ಹಾಗೂ ಸಂಸ್ಕೃತದ ಕಾವ್ಯಗಳನ್ನು ಹಲವು ರಾಗಗಳಲ್ಲಿ ವಾಚನ ಮಾಡುವುದನ್ನು ರೂಢಿಸಿಕೊಂಡರು. 100ಕ್ಕೂ ಹೆಚ್ಚು ವಿಭಿನ್ನ ರಾಗಗಳಲ್ಲಿ ವಾಚನ ಮಾಡುವ ಮೂಲಕ ಶತರಾಗಿ ಎಂಬ ಬಿರುದಿಗೂ ಪಾತ್ರರಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

