Breaking News

ಬಸ್ ಪಲ್ಟಿ : 20 ಜನರಿಗೆ ಗಾಯ

ಧಾರವಾಡ: ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ  ಧಾರವಾಡ ಜಿಲ್ಲೆ ನವಲಗುಂದದ ಬೆಣ್ಣೆಹಳ್ಳದ ಬ್ರಿಡ್ಜ್ ಬಳಿ ಬಸ್ ಪಲ್ಟಿಯಾಗಿದೆ.

ಸ್ಟೇರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ KSRTC ಬಸ್ ಅಪಘಾತಕ್ಕೀಡಾಗಿದೆ. ಗಾಯಗೊಂಡ ಪ್ರಯಾಣಿಕರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *