ಬೆಂಗಳೂರು: ಬಿಜೆಪಿಯ ಕೆಲ ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಆರ್. ಅಶೋಕ್ ನಮ್ಮೊಂದಿಗೂ ಕೆಲ ಕಾಂಗ್ರೆಸ್ ನಾಯಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಓರ್ವ ಪಕ್ಷಾಂತರಿ. ಹೀಗಾಗಿ ಅವರು ಪಕ್ಷಾಂತರದ ಬಗ್ಗೆಯೇ ಮಾತನಾಡುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದ ಶಾಸಕರನ್ನು ಸೂರ್ಯ ಚಂದ್ರ ಇರುವವರೆಗೂ ಮತ್ತೆ ವಾಪಸ್ ಸೇರಿಸಿಕೊಳ್ಳುವುದಿಲ್ಲ ಎಂದಿದ್ದರು. ಆದರೀಗ, ಅವರು ಬರುವುದಕ್ಕೆ ಅಡ್ಡಿಯಿಲ್ಲ ಎನ್ನುತ್ತಾರೆ. ಕಾಂಗ್ರೆಸ್ಗೆ ಗೆಲ್ಲುವ ಶಕ್ತಿ ಇಲ್ಲ. ಅದಕ್ಕಾಗಿ ಇಂತಹ ಮಾತುಗಳನ್ನಾಡುತ್ತಿದ್ದಾರೆ ಎಂದು ವ್ಯಂಗವಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

