Breaking News

ಕೋವಿಡ್ ನಿಯಮ ಉಲ್ಲಂಘನೆ : ಬಿಜೆಪಿ ಶಾಸಕ ವಿರುದ್ಧ ಎಫ್‌ಐಆರ್

ಬೀದರ್: ಕೊರೋನಾ ಸೋಂಕಿನ ಈ ಸಂದರ್ಭದಲ್ಲಿ, ಹೆಚ್ಚು ಜನರು ಸೇರುವಂತ ಯಾವುದೇ ಕಾರ್ಯಕ್ರಮ ನಿಷಿದ್ಧವಾಗಿದೆ. ಹೀಗಿದ್ದೂ ಮೂರು ದಿನಗಳ ಹಿಂದೆ ಈ ನಿಯಮ ಮೀರಿ ಕಳೆದ ಮೂರು ದಿನಗಳ ಹಿಂದೆ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ ಗೋಕುಳ ಗ್ರಾಮದವರೆಗೆ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗ ಅವರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಪಾದಯಾತ್ರೆಯಲ್ಲಿ ಮಾಸ್ಕ್, ದೈಹಿಕ ಅಂತರ ಕೂಡ ಕಾಪಾಡಿರಲಿಲ್ಲ.
ಈ ಕಾರಣಕ್ಕೆ ಎಫ್‌ಐಆರ್ ದಾಖಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು ಕೋವಿಡ್ ನಿಯಮ ಉಲ್ಲಂಘಿಸಿ ಪಾದಯಾತ್ರೆಯಲ್ಲಿ ಭಾಗವಹಿಸಿದಂತ ಬಿಜೆಪಿ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಸವಕಲ್ಯಾಣ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಕೋವಿಡ್ ನಿಯಮದಡಿ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗ ವಿರುದ್ಧ ಬಸವಕಲ್ಯಾಣ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.












Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *