Breaking News

ಕಾಂಗ್ರೆಸ್ ಗೂ ನಮಗೂ ಇನ್ನು ಮುಗಿದ ಅಧ್ಯಾಯ : ಇಬ್ರಾಹಿಂ


ಬೆಂಗಳೂರು : ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೇವು. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೇವು, ಕಾಂಗ್ರೆಸ್ ಗೂ ನಮಗೂ ಇನ್ನೂ ಮುಗಿದ ಅಧ್ಯಾಯ ಎಂದು ಎಂ.ಎಲ್.ಸಿ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಶೀಘ್ರದಲ್ಲೇ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಕಾಂಗ್ರೆಸ್ ಗೂ ನಮಗೂ ಇನ್ನು ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಸುಳಿವು ನೀಡಿದ್ದಾರೆ.

ಸಿದ್ದರಾಮಯ್ಯಗೆ ಹೊಸ ರಾಜಕೀಯ ಜೀವನ ಕೊಟ್ಟೆವು. ಅದಕ್ಕೀಗ ಸಿದ್ದರಾಮಯ್ಯ ಹೊಸ ಉಡುಗೋರೆ ನೀಡಿದ್ದಾರೆ. ಅವರು ಕೊಟ್ಟ ಉಡುಗೊರೆ ಖುಷಿಯಿಂದ ಸ್ವೀಕರಿಸುವೆ. ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುವ ಮುನ್ಸಚನೆ ಇತ್ತು. ಇದು ತಿಳಿದು ಬಾದಾಮಿಯಲ್ಲಿ ನಾಮ ಪಾತ್ರ ಹಾಕಿಸಿದ್ದೆ. ಅಲ್ಲಿ ಎಲ್ಲ ನಾಯಕರನ್ನು ಒಪ್ಪಿಸಿ ಬಾದಾಮಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದೆ. ಬಳಿಕ ಬದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದು ಶಾಸಕರಾದರು ಎಂದರು.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *