Breaking News

ಕೋವಿಡ್‌ ನಿರ್ವಹಣೆಯಲ್ಲಿ ದೇಶದಲ್ಲೆ ಕರ್ನಾಟಕ ಮೊದಲ ಸ್ಥಾನ : ಥಾವರ್‌ಚಂದ ಗೆಹಲೋತ್‌

ಬೆಂಗಳೂರು: ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ 73ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ,
ಕೊರೋನಾ  ವಿರುದ್ಧದ ಹೋರಾಟದಲ್ಲಿ ರಾಜ್ಯ ಯಶಸ್ವಿಯಾಗಿದ್ದು, ಕೋವಿಡ್‌  ನಿರ್ವಹಣೆಯಲ್ಲಿ ಕರ್ನಾಟಕ ದೇಶದಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ಕಾರ್ಮಿಕರಿಗೆ 236 ಕೋಟಿ ರು.
ಹಾಗೂ ಅಸಂಘಟಿತ ಕಾರ್ಮಿಕರಿಗೆ 628 ಕೋಟಿ ಪರಿಹಾರ ನೀಡಲಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ ಗೆಹಲೋತ್‌ ಹೇಳಿದರು.

ಬುಧವಾರ ನಗರದ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ 73ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಕೋವಿಡ್‌, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರ ಮಾಡಿರುವ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಾಡಿನಲ್ಲಿ ಜಲಾನಯನ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಿದೆ. 2021 ಆಗಸ್ಟ್‌ನಲ್ಲಿ ಕೃಷ್ಣಾ ನದಿಯ ಇಂಡಿ ಶಾಖೆಯಿಂದ ಸಿಂದಗಿ ಪಟ್ಟಣಕ್ಕೆ ಕುಡಿಯುವ ನೀರನ್ನು ಒದಗಿಸಲು .27.10 ಕೋಟಿ ವೆಚ್ಚ ಮಾಡಲಾಗಿದೆ ಎಂದರು.

Share News

About admin

Check Also

ಹುಬ್ಬಳ್ಳಿಗೆ ಆಗಮಿಸಿದ ಬಿ.ಎಲ್.ಸಂತೋಷ: ಅದ್ದೂರಿಯಾಗಿ ಸ್ವಾಗತಿಸಿದ ಕಾರ್ಯಕರ್ತರು…

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ ಆಗಮಿಸಿದ್ದು,‌ಬಿಜೆಪಿ …

Leave a Reply

Your email address will not be published. Required fields are marked *

You cannot copy content of this page