ಬೆಂಗಳೂರು: ಬುಧವಾರ ರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನೋವಾ ಕ್ರಿಸ್ಟಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿರುವ ಘಟನೆ ನಗರದ ಮಂತ್ರಿ ಮಾಲ್ ಬಳಿ ನಡೆದಿದೆ.
ಇನೋವಾ ಕ್ರಿಸ್ಟಾ ಕಾರಿನಲ್ಲಿ ಓವರ್ ಸ್ಪೀಡ್ ಆಗಿ ಬಂದ ಚಾಲಕ ರಸ್ತೆ ಡಿವೈಡರ್‍ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಎರಡು ಏರ್ ಬ್ಯಾಗ್‌ಗಳು ಓಪನ್ ಆಗಿದೆ. ಅಲ್ಲದೇ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸೇರಿ ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ವೇಳೆ ಕಾರಿನಲ್ಲಿ ಮದ್ಯ ಬಾಟಲಿ ಪತ್ತೆಯಾಗಿದ್ದು, ಮದ್ಯ ಸೇವಿಸಿ ಕಾರು ಚಾಲನೆ ಮಾಡಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸದ್ಯ ಇಬ್ಬರನ್ನೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಮೆಡಿಕಲ್ ಟೆಸ್ಟ್ ಮಾಡಿಸುತ್ತಿದ್ದಾರೆ. ಈ ವೇಳೆ ಮದ್ಯ ಸೇವನೆ ಮಾಡಿರುವುದು ಕಂಡು ಬಂದರೆ ಡ್ರಿಂಕ್ ಆಯಂಡ್ ಡ್ರೈವ್ ಕೇಸ್ ಅಡಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

