Breaking News

ದೇಶದಲ್ಲಿ 2,86,384 ಕೋವಿಡ್ ಪತ್ತೆ



ನವದೆಹಲಿ: ದೇಶದಲ್ಲಿ ದೈನಂದಿನ ಕೊರೊನಾ ಸೋಂಕಿತರ ಸಂಖ್ಯೆ ಸದ್ಯ 3 ಲಕ್ಷದ ಗಡಿಯಿಂದ ಕೆಳಗೆ ಇಳಿದಿದೆ. ಅಷ್ಟೇ ಅಲ್ಲದೆ ನಿನ್ನೆ (ಬುಧವಾರ)ಕ್ಕಿಂತ ಇಂದು ಸಾವಿನ ಸಂಖ್ಯೆ ಕೊಂಚ ಕಡಿಮೆಯಾಗಿದೆ. ನಿನ್ನೆ 665 ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ದರು.

ಕೇಂದ್ರ ಆರೋಗ್ಯ ಇಲಾಖೆ ಇಂದು ನೀಡಿದ ಮಾಹಿತಿ ಪ್ರಕಾರ, 24 ಗಂಟೆಗಳ ಅವಧಿಯಲ್ಲಿ 2,86,384 ಜನರಿಗೆ ಸೋಂಕು ಕಾಣಿಸಿಕೊಂಡಿದೆ, 573 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 22,02,472ಕ್ಕೆ ಏರಿದೆ. ಸೋಂಕು ದೃಢ ಪ್ರಮಾಣ ಶೇಕಡ 19.59ರಷ್ಟಿದೆ. 24 ಗಂಟೆಗಳಲ್ಲಿ 3,06,357 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಈವರೆಗೂ 1,63,84,39,207 ಡೋಸ್ ವ್ಯಾಕ್ಸಿನ್ ಹಾಕಲಾಗಿದೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *