ರಾಮನಗರ: ಗಂಡನ ಕಿರುಕುಳ ತಾಳಲಾರದೆ ತನ್ನ ತವರು ಮನೆಯಲ್ಲೇ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಮಂಜುನಾಥನಗರ ಬಡಾವಣೆಯಲ್ಲಿ ನಡೆದಿದೆ.ಪತಿಯು ತೊಂದರೆ ಕೊಡುತ್ತಿದ್ದರು ಈ ಕಾರಣ ಎಂಬ ಆರೋಪ ಕೇಳಿಬಂದಿದೆ.
ಗರ್ಭಿಣಿ ಆಗಿರುವ ಜಾನ್ಹವಿ (23) ಆತ್ಮಹತ್ಯೆಗೆ ಶರಣಾದ ಮುಗ್ಧ ಹೆಣ್ಣು ಮಗಳು. ಕಳೆದ 9 ತಿಂಗಳ ಹಿಂದೆ ಕರ್ಣ ಎಂಬುವನ ಜೊತೆ ವಿವಾಹವಾಗಿತ್ತು. ಕರ್ಣ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬಲ್ಲೇನಹಳ್ಳಿ ಗ್ರಾಮದವನಾಗಿದ್ದು, ಕಳೆದ ಹಲವು ತಿಂಗಳಿಂದ ತಮ್ಮ ಮಗಳಿಗೆ ಹೊಡೆದು ಚಿತ್ರಹಿಂಸೆ ನೀಡುತ್ತಿದ್ದ ಎಂದು ಜಾನ್ಹವಿ ಪೋಷಕರು ಆರೋಪಿಸಿದ್ದಾರೆ.
ಮನೆಯಲ್ಲಿದ್ದ ತಾಯಿ ಕೂಡ ಕೆಲಸಕ್ಕೆಂದು ಹೊರಗೆ ಹೋಗಿದ್ದ ವೇಳೆ ಜಾನ್ಹವಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಐಜೂರು ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

