Breaking News

ಸರ್ವೋದಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ಸ್ಥಾನ ವಿವಾದ : ಬಸವರಾಜ ಹೊರಟ್ಟಿ ವಿರುದ್ಧ ಕೇಸ್



ಹುಬ್ಬಳ್ಳಿ: ಧಾರವಾಡ ಸರ್ವೋದಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ಸ್ಥಾನ ವಿವಾದ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇದೀಗ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧ ಅಖಿಲ‌ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾವು ಧಾರವಾಡದ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದೆ. ಈ ಮೂಲಕ ಶಿಕ್ಷಣ ಸಂಸ್ಥೆಯ ವಿವಾದ ಪೊಲೀಸ್​ ಮೆಟ್ಟಿಲೇರಿದೆ.

ಕಳೆದ ಜ.22 ರಂದು ವಾಲ್ಮೀಕಿ ಮಹಾಸಭಾದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಮಾಧ್ಯಮಗೋಷ್ಟಿ ನಡೆಸಿ, ಸಭಾಪತಿ ಬಸವರಾಜ ಹೊರಟ್ಟಿ ಸರ್ವೋದಯ ಟ್ರಸ್ಟ್​ಗೆ ಯಾವುದೇ ಚೇರ್ಮನ್ ಇಲ್ಲ. ಆದಾಗ್ಯೂ ಅವರು ರಾಜಕೀಯ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಧ್ಯಕ್ಷೀಯ ಅಧಿಕಾರ ಚಲಾಯಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಅದರಂತೆ ಅಖಿಲ‌ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಸದಸ್ಯರು ಧಾರವಾಡದಲ್ಲಿರುವ ಶಾಲೆಗಳಿಗೆ ಪರಿಶೀಲನೆಗೆಂದು ಭೇಟಿ ನೀಡಿದಾಗ ಮುಗದ ಗ್ರಾಮದಲ್ಲಿ ಬಸವರಾಜ ಹೊರಟ್ಟಿ ಅವರ ಬೆಂಬಲಿಗರು ಮಹಾಸಭಾದ ಸದಸ್ಯರ ಮೇಲೆ ಹಲ್ಲೆಗೈದಿದ್ದಾರೆ. ಅಲ್ಲದೆ, ಜಾತಿ ನಿಂದನೆ ಜೊತೆಗೆ ಕಾರು ಜಖಂಗೊಳಿಸಿದ್ದಾರೆಂದು ಆರೋಪಿಸಿ ಮೋಹನ್​ ಗುಡಸಲಮಿ ಎಂಬುವರು ಬಸವರಾಜ ಹೊರಟ್ಟಿ ಸೇರಿದಂತೆ 5 ಮಂದಿ ವಿರುದ್ಧ ಅಟ್ರಾಸಿಟಿ ಕೇಸ್​ ದಾಖಲಿಸಿದ್ದಾರೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *