Breaking News

ಸೆಲ್ಫಿ ಹುಚ್ಚಿಗೆ ಬಲಿಯಾದ ವಿದ್ಯಾರ್ಥಿ


ಚಾಮರಾಜನಗರ:   ಮೈಸೂರು ಮೂಲದ ಉಮಾಶಂಕರ್ (19)   ನರ್ಸಿಂಗ್‍ ವಿದ್ಯಾರ್ಥಿಯೊಬ್ಬ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಹೊಗೇನಕಲ್ ಜಲಪಾತ ನೋಡಲು ಹೋಗಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ಕಾಲು ಜಾರಿಬಿದ್ದು ಮೃತಪಟ್ಟಿದ್ದಾನೆ.

ಇಂದು ಸ್ನೇಹಿತರೊಂದಿಗೆ ರಜೆಯ ಮಜಾ ಅನುಭವಿಸಲು ಹೊಗೇನಕಲ್ ಜಲಪಾತಕ್ಕೆ ತೆರಳಿದ್ದ ವೇಳೆ ನೀರು ಧುಮ್ಮಿಕ್ಕುವ ಸ್ಥಳದ ತುದಿಯಲ್ಲಿ ನಿಂತುಕೊಂಡು ಸೆಲ್ಳಿ ತೆಗೆದುಕೊಳ್ಳುವಾಗ ಘಟನೆ ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಸದ್ಯ ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.

Share News

About admin

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *