Breaking News

ಬಿ.ವೈ.ವಿಜಯೇಂದ್ರ ಕುರಿತು ವ್ಯಂಗ್ಯವಾಡಿದ ಯತ್ನಾಳ್



ವಿಜಯಪುರ:  ಅಧಿಕಾರ ಸಿಗುತ್ತದೆ ಎಂಬ ಆಸೆಯೊಂದಿಗೆ ಯಾರೆಲ್ಲಾ ಕೋಟ್ ಹೊಲಿಸಿಕೊಂಡಿದ್ದಾರೋ ಗೊತ್ತಿಲ್ಲ. ಬಿಜೆಪಿಯಿಂದ (BJP) ಬಹಳ ಜನ ಹೋಗ್ತಾರೆ ಎಂಬ ಮಾತು ಕೇಳಿಬಂದಿದ್ದು ಒಳ್ಳೇದಾಯ್ತು. ಸಚಿವ ಸೋಮಶೇಖರ್ ಸೇರಿ ಹಲವರು ಪಕ್ಷ ಬಿಡುವುದಿಲ್ಲ,.
ಮಾಧ್ಯಮಗಳು ಅದೇ ಹೇಳಿಕೆಯನ್ನು ತೋರಿಸಿ, ಪಕ್ಷವನ್ನು ಗಟ್ಟಿ ಮಾಡುತ್ತಿವೆ ಎಂದು  ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.

ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರಗೆ ಪಕ್ಷ ಹಾಗೂ ಸರ್ಕಾರದಲ್ಲಿ ಸ್ಥಾನಮಾನ ನೀಡುವ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಅನಿವಾರ್ಯ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮಗೆ ಯಾರೂ ಅನಿವಾರ್ಯ ಅಲ್ಲ. ಬಿಜೆಪಿ ಮತ್ತೆ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತದೆ. ಕುಮಾರಸ್ವಾಮಿ ಕುಸ್ತಿ ಇರೋದು ಡಿ.ಕೆ.ಶಿವಕುಮಾರ್ ಮೇಲೆಯೇ ಹೊರತು ನಮ್ಮ ಮೇಲೆ ಅಲ್ಲ ಎಂದು ಹೇಳಿದರು.

Share News

About admin

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *