Breaking News

ಪೊಲೀಸ್ ಸಿಬ್ಬಂದಿ ಮೇಲೆ ಶಾಸಕ ಬಿಜೆಪಿ ಹಲ್ಲೆ

ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಯನ್ನು ಮೂಡಿಗೆರೆ ಶಾಸಕ ಬಿಜೆಪಿ ಎಂ.ಪಿ. ಕುಮಾರಸ್ವಾಮಿ ಅವರು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಪಾರ್ಕಿಂಗ್ ವಿಚಾರವಾಗಿ ನೈಟ್ ಬೀಟ್ ನಲ್ಲಿದ್ದ ಹೊಯ್ಸಳ ಸಿಬ್ಬಂದಿ ಹೆಚ್.ಪಿ. ನರಸಿಂಹಮೂರ್ತಿ, ಕಾನ್ಸ್ ಟೇಬಲ್ ಚಂದ್ರಶೇಖರ್ ಅವರನ್ನು ಎಂಪಿ ಕುಮಾರಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಪೊಲೀಸ್ ಸಿಬ್ಬಂದಿ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದು, ಈ ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಎಸಿಪಿ ಶಾಸಕರನ್ನು ಸಮಾಧಾನಗೊಳಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Share News

About admin

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *