Breaking News

6 ತಿಂಗಳ ಪೂರೈಸಿದ ಬೊಮ್ಮಾಯಿ ಸರ್ಕಾರ : ಸಾಧನಾ ಪುಸ್ತಕ ಬಿಡುಗಡೆ


ಬೆಂಗಳೂರು : ರಾಜ್ಯದ  ಸವಾಲಿನ ಸನ್ನಿವೇಶದಲ್ಲಿ ಮುಖ್ಯಮಂತ್ರಿ ಹುದ್ದೆ ಅಲಕಂರಿಸಿದ ಬಸವರಾಜ ಬೊಮ್ಮಾಯಿ ಇಂದಿಗೆ ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ 6 ತಿಂಗಳು ಪೂರೈಸುತ್ತಿದ್ದಾರೆ.ಜೊತೆಗೆ ಅವರ 62 ನೇ ಹುಟ್ಟು ಹಬ್ಬ ಕೂಡ ಇದೆ. ಹುಟ್ಟು ಹಬ್ಬ ಆಚರಿಸಿಕೊಳ್ಳದಿದ್ದರೂ ರಾಜ್ಯ ಸರ್ಕಾರದ 6 ತಿಂಗಳ ಸಾಧನೆಯ ಸಂಭ್ರಮವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ.

ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಸರ್ಕಾರದ ಸಾಧನೆಗಳನ್ನು ಒಳಗೊಂಡ ಭವ್ಯ ಭವಿಷ್ಯದ ಭರವಸೆಯ ಹೆಜ್ಜೆಗಳು ಎಂಬ ಶೀರ್ಷಿಕೆಯುಳ್ಳ ಸಾಧನಾ ಪುಸ್ತಕವನ್ನು ವಿಧಾನಸೌಧದಲ್ಲಿ ಇಂದು ಬಿಡುಗಡೆಗೊಳಿಸಲಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *