ಸಿಎಂ ನೇತೃತ್ವದಲ್ಲಿ ಇಂದು ಕೋವಿಡ್ ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ನೈಟ್ ಕರ್ಫ್ಯೂ ರದ್ದು ಮಾಡಲು ನಿರ್ಧರಿಸಲಾಗಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಸಚಿವ ಆರ್ ಅಶೋಕ್, ಬಿ.ಸಿ ನಾಗೇಶ್, ಬಿ.ಸಿ ಪಾಟೀಲ್, ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸೇರಿ ಪ್ರಮುಖರು ಭಾಗವಹಿಸಿದ್ದರು.
ಸಭೆಯ ನಂತರ ಮಾತನಾಡಿದ ಸಚಿವ ಆರ್. ಅಶೋಕ್ ಜನವರಿ 31 ರಿಂದ ನೈಟ್ ಕರ್ಫ್ಯೂ ತೆರವು ಮಾಡಲಾಗುತ್ತದೆ ಎಂದು ತಿಳಿಸಿದ್ಧಾರೆ. ಅಲ್ಲದೇ ಸಭೆಯಲ್ಲಿ ಹೋಟೆಲ್ ಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ತೀರ್ಮಾನಿಸಲಾಗಿದ್ದು, ಸಿನಿಮಾ ಹಾಲ್ಗಳನ್ನು 50:50 ರಷ್ಟು ಮುಂದುವರಿಸಲು, ಮದುವೆಗೆ 200 ಬದಲು 300 ಜನರು ಭಾಗವಹಿಸಲು ಅನುಮತಿ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

