Breaking News

ಮೊಬೈಲ್ ಗೋಸ್ಕರ್ ಪ್ರಾಣವನ್ನೇ ಒತ್ತೆ ಇಟ್ಟ ಬೂಪ


ಚಿಕ್ಕಬಳ್ಳಾಪುರ : ಜೇಬಿನಲ್ಲಿದ್ದ ಫೋನ್ ಆಕಸ್ಮಿಕವಾಗಿ ಬಾವಿಯ ಒಳಗೆ ಬಿದ್ದಿದ್ದು, ಇದರಿಂದ ಗಾಬರಿಗೊಂಡ ವ್ಯಕ್ತಿ ಆಳದ ಬಾವಿಯೊಳಗೆ ಇಳಿದು ಮೊಬೈಲ್ ಮರಳಿ ತರುವ ಹರಸಾಹಸ ಮಾಡಿ ಸಾವನ್ನಪ್ಪಿರುವ  ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗುಡಿಹಳ್ಳಿಯಲ್ಲಿ ನಡೆದಿದೆ.

ಅನಿಲ್ ಕುಮಾರ್ (35) ಸಾವನ್ನಪ್ಪಿದ ಯುವಕ ಎನ್ನಲಾಗಿದೆ. ಆಕಸ್ಮಿಕವಾಗಿ ಮೊಬೈಲ್ ಬಾವಿಯೊಳಗೆ ಬೀಳುತ್ತಿದ್ದಂತೆ, ಈ ವ್ಯಕ್ತಿ ಹಗ್ಗ ಕಟ್ಟಿಕೊಂಡು ಬಾವಿಯೊಳಗೆ ಇಳಿದಿದ್ದಾನೆ.

ಸುದ್ದಿ ತಿಳಿಯುತ್ತಿದ್ದಂತೆ ಕೂಡಲೇ ಎನ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ತೆರಳಿ ಯುವಕನನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆದರೆ, ಮೇಲೆ ಎತ್ತುವಷ್ಟರಲ್ಲಿಯೇ ಅನಿಲ್ ಸಾವನ್ನಪ್ಪಿದ್ದ ಎನ್ನಲಾಗಿದೆ.

ಈ ಕುರಿತು ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *