Breaking News

ರಿಕ್ಷಾ ಮತ್ತು ಜೀಪ್ ನಡುವೆ ಅಪಘಾತ: ಐವರಿಗೆ ಗಾಯ



ಪುತ್ತೂರು : ಆಟೋ ರಿಕ್ಷಾ ಮತ್ತು ಜೀಪ್ ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕೆಯ್ಯೂರು ಗ್ರಾಮದ ಪೊಯ್ಯೋಳೆ ಎಂಬಲ್ಲಿ ನಡೆದಿದೆ.

ಗಾಯಾಳುಗಳನ್ನು ರಿಕ್ಷಾದಲ್ಲಿದ್ದ ಪೊಯ್ಯೋಳೆ ನಿವಾಸಿಗಳಾದ ಪ್ರವೀಣ್‍, ಗುರು, ಹರ್ಷಿತ್, ಲೀಲಾ ಹಾಗೂ ಲಕ್ಷ್ಮೀ ಎಂದು ಗುರುತಿಸಲಾಗಿದ್ದು, ಎಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ.

ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರವೀಣ್‍ ಮತ್ತು ಗುರು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಆಟೋ ರಿಕ್ಷಾ ಹಾಗೂ ಜೀಪ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಸಂಪ್ಯ ಪೊಲೀಸ್‍ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *