Breaking News

ಜಿಲ್ಲಾಧಿಕಾರಿಯಿಂದ ಆರೋಗ್ಯ ಇಲಾಖೆಗೆ ಆಂಬ್ಯುಲೆನ್ಸ್ ಹಸ್ತಾಂತರ

ಹುಬ್ಬಳ್ಳಿ : ಫ್ಲೀಟ್‌ ಗಾರ್ಡ್ ಫಿಲ್ಟರ್ಸ್ ಪ್ರೈವೇಟ್ ಲಿಮಿಟೆಡ್ ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಚಟುವಟಿಕೆಯಡಿಯಲ್ಲಿ ಮಹೀಂದ್ರಾ ಸುಪ್ರೊ ಝೆಡ್ ಎಕ್ಸ್ ಆಂಬ್ಯಲೇನ್ಸ್
ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮೂಲಕ ಹುಬ್ಬಳ್ಳಿ ತಾಲೂಕು ಆರೋಗ್ಯ ಇಲಾಖೆಗೆ ಹಸ್ತಾಂತರಿಸಲಾಯಿತು.

ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಲ್ಲಿ ಇಂದು ಆಂಬ್ಯುಲೆನ್ಸ್ ಗೆ ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.

8 ಲಕ್ಷದ ಅಂಬ್ಯುಲೆನ್ಸ್ ನ್ನು ಸಾರ್ವಜನಿಕ ಸೇವೆಗೆ ನೀಡಲಾಗುತ್ತಿದೆ. ಸಮಾಜದ ಆರೋಗ್ಯಕ್ಕೆ ಉಪಯುಕ್ತ ರೀತಿಯಲ್ಲಿ ಆಂಬ್ಯುಲೆನ್ಸ್ ಬಳಕೆಯಾಗಬೇಕು. ಕಂಪನಿಯ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಆಂಬ್ಯುಲೆನ್ಸ್ ನೀಡುತ್ತಿರುವುದು ಸಂತಸ ತಂದಿದೆ ಎಂದು ಫ್ಲೀಟ್‌ ಗಾರ್ಡ್ ಫಿಲ್ಟರ್ಸ್ ಪ್ರೈವೇಟ್ ಲಿಮಿಟೆಡ್ ನ ಮ್ಯಾನೇಜರ್ ಪ್ರಕಾಶ್ ಮಾಯಾಚಾರಿ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಫ್ಲೀಟ್‌ ಗಾರ್ಡ್ ಫಿಲ್ಟರ್ಸ್ ಪ್ರೈವೇಟ್ ಲಿಮಿಟೆಡ್ ನ ಮಾನವ ಸಂಪನ್ಮೂಲ ಅಭಿವೃದ್ಧಿ ಅಧಿಕಾರಿ ಸಂತೋಷ ಮುನವಳ್ಳಿ, ಮಂಜುನಾಥ ಚಚಡಿ ಸೇರಿದಂತೆ ಇತರರು ಇದ್ದರು.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *