Breaking News

ನರಗುಂದದಲ್ಲಿ ಗಲಾಟೆ ಪ್ರಕರಣ: ಸಿಪಿಐ ಅಮಾನತು



ಗದಗ : ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದ್ದ ಗಲಾಟೆ ಹಾಗೂ ಚಾಕು ಇರಿತ ಪ್ರಕರಣದಲ್ಲಿ ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಸಿಪಿಐ ನಂದೇಶ್ವರ ಕುಂಬಾರ್  ಅವರನ್ನು ಅಮಾನತು ಮಾಡಿ ಬೆಳಗಾವಿಯ ಉತ್ತರ ವಲಯ ಐಜಿಪಿ ಎನ್ ಸತೀಶ್ ಕುಮಾರ್ ಅಮಾನತು ಆದೇಶವನ್ನು ಹೊರಡಿಸಿದ್ದಾರೆ.

ಜ. 17 ರಂದು ನರಗುಂದ ಪಟ್ಟಣದಲ್ಲಿ ನಡೆದಿದ್ದ ಗಲಾಟೆ ಹಾಗೂ ಚಾಕು ಇರಿತದಲ್ಲಿ ಶಮೀರ್ ಶಹಪುರ ಎಂಬಾತನ ಹತ್ಯೆಯಾಗಿತ್ತು. ಮಾತ್ರವಲ್ಲದೇ ಶಮ್ ಶೇರ್ ಖಾನ್ ಎಂಬಾತನಿಗೆ ಗಂಭೀರ ಗಾಯವಾಗಿತ್ತು. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ ಬಂಧನವಾದರೂ ಪೊಲೀಸ್ ವೈಫಲ್ಯದ ಹಿನ್ನೆಲೆಯಲ್ಲಿ ಗಲಾಟೆ ನಡೆದ ಬಗ್ಗೆ ಆರೋಪವಿತ್ತು. ಹಾಗಾಗಿ ಸಿಪಿಐ ನಂದೇಶ್ವರ ಕುಂಬಾರ್ ಅವರನ್ನು ಅಮಾನತು ಮಾಡಲಾಗಿದೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *