Breaking News

ಡಿಕೆಶಿ , ಸಿದ್ದರಾಮಯ್ಯ ಎಣ್ಣೆ ನೀರು ಇದ್ದಂಗೆ : ಗೋವಿಂದ ಕಾರಜೋಳ



ಬೆಂಗಳೂರು: ಕಾಂಗ್ರೆಸ್ ನಲ್ಲಿ ಎರಡೇ ಅಲ್ಲ, ಮೂರು ಗುಂಪುಗಳಿವೆ. ಡಿಕೆಶಿ ಹಾಗೂ ಸಿದ್ದರಾಮಯ್ಯ ಎಣ್ಣೆ ನೀರು ಇದ್ದಂಗೆ. ಅವರಿಬ್ಬರು ಒಂದಾಗಲು ಸಾಧ್ಯವೇ ಇಲ್ಲ  ಎಂದು ಸಚಿವ ಗೋವಿಂದ ಕಾರಜೋಳ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸ್ಥಿತಿ ಗಂಭೀರವಾಗಿದ್ದು, ಅವರವರಲ್ಲೇ ಮೂರು ಗುಂಪುಗಳಿವೆ. ಸಿದ್ದರಾಮಯ್ಯ, ಡಿಕಶಿ ಎರಡು ಗುಂಪಾದರೆ ಮೂರನೇಯ ಗುಂಪಿನಲ್ಲಿ ಖರ್ಗೆ, ಪರಮೇಶ್ವರ, ಶಾಮನೂರು ಶಿವಶಂಕರಪ್ಪ ಸೇರಿದಂತೆ ಇನ್ನಿತರರಿದ್ದಾರೆ ಎಂದು ಹೇಳಿದರು. ಇದೇ ವೇಳೆ ಬಿಜೆಪಿಯ ಕೆಲ ಶಾಸಕರು ಕಾಂಗ್ರೆಸ್ ಗೆ ಸೇರಲಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯ ಶಾಸಕರು ಕಾಂಗ್ರೆಸ್‍ಗೆ ಹೋಗಲ್ಲ, ಕಾಂಗ್ರೆಸ್ ಈಗ ಮುಳುಗುವ ಹಡಗು. ಈಗಾಗಲೇ ಕಾಂಗ್ರೆಸ್ ದೇಶದ 27 ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ಅಂತಹ ಪಕ್ಷಕ್ಕೆ ಯಾರೂ ಹೋಗಲು ಸಾಧ್ಯವಿಲ್ಲ. ಬಿಜೆಪಿ ಅವರು ಕಾಂಗ್ರೆಸ್‍ಗೆ ಬರುತ್ತಾರೆ ಎನ್ನುವ ಭ್ರಮೆಯಲ್ಲಿದ್ದಾರೆ ಎಂದು ಟೀಕಿಸಿದರು.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *