ಮಂಡ್ಯ: ಗರ್ಭಿಣಿ ಪತ್ನಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಂತ ಸಂದರ್ಭದಲ್ಲಿ ಹಿಂಬದಿಯಿಂದ ಬಂದಂತ ಲಾರಿಯೊಂದು ಡಿಕ್ಕಿಯಾದ ಪರಿಣಾಮ, ಪತಿಯ ಕಣ್ಣೆದುರಿಗೆ ಗರ್ಭಿಣಿ ಪತ್ನಿ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕಿಕ್ಕೇರಿಯ ಬಳಿಯಲ್ಲಿ ಬೈಕ್ ನಲ್ಲಿ ಗರ್ಭಿಣಿ ಪತ್ನಿ ಸಹನ ಹಾಗೂ ಪತಿ ಸಂದೀಪ್ ಚನ್ನರಾಯಪಟ್ಟಣಕ್ಕೆ ತೆರಳುತ್ತಿದ್ದರು.
ಈ ಸಂದರ್ಭದಲ್ಲಿ ಲಾರಿಯೊಂದು ಹಿಂಬದಿಯಿಂದ ಡಿಕ್ಕಿಯಾಗಿದೆ. ಪರಿಣಾಮವಾಗಿ ಬೈಕ್ ನಲ್ಲಿ ಕುಳಿತಿದ್ದಂತ ಮಹಿಳೆ ಕೆಳಗೆ ಬಿದ್ದಿದ್ದಾರೆ. ಆ ವೇಳೆ ಲಾರಿ ಗರ್ಭಿಣಿಯಾಗಿದ್ದಂತ ಮಾಚಗೋನಹಳ್ಳಿಯ ಸಹನ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಕಿಕ್ಕೇರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

