ಧಾರವಾಡ: ನಗರದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದಲ್ಲಿ ವಾಹನ ಚಾಲಕರಾಗಿ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ಕಾಯಂ ಸಿಬ್ಬಂದಿ ಎಂದು ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಚಾಲಕರು ಇಂದು ಪ್ರಚಾರ ಸಭಾದ ಎದುರು ಪ್ರತಿಭಟನೆ ನಡೆಸಿದರು.
ಕಳೆದ 10 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಚಾಲಕರಾಗಿ ಕೆಲಸ ಮಾಡಲಾಗುತ್ತಿದೆ. ಕಾಯಂ ನೇಮಕಾತಿ ಮಾಡಿಕೊಳ್ಳಬೇಕೆಂದ
ಒತ್ತಾಯಿ ಸಿದ್ದಕ್ಕಾಗಿ ಇಬ್ಬರು ನೌಕರರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. 10 ವರ್ಷಗಳಿಂದ ಸೇವೆ ಸಲ್ಲಿಸಿದ್ದಕ್ಕೆ ಸಂಸ್ಥೆಯು ಯಾವುದೇ ಸೇವಾ ಭದ್ರತೆ ನೀಡಿಲ್ಲ ಎಂದು ಪ್ರತಿಭಟನೆಕಾರರು ಹೇಳಿದ್ದಾರೆ. ಈಗ 20 ಜನ ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಅವರಿಗೆ ವೇತನ ಹೆಚ್ಚಳ ಮಾಡಿ ಸೇವಾ ಭದ್ರತೆ ನೀಡಬೇಕು ಎಂದು ಚಾಲಕರು ಒತ್ತಾಯಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

