Breaking News

ಇಬ್ಬರು ಮಹಿಳೆಯರ ಮೇಲೆ ಕಾಡು ಪ್ರಾಣಿ ದಾಳಿ

ಧಾರವಾಡ: ಇಬ್ಬರು ಮಹಿಳೆಯರ ಮೇಲೆ ಕಾಡು ಪ್ರಾಣಿಯೊಂದು ದಾಳಿ ಮಾಡಿರುವ ಘಟನೆ ತಾಲೂಕಿನ ಗೋವನಕೋಪ್ಪ ಗ್ರಾಮದ ವ್ಯಾಪ್ತಿಯಲ್ಲಿ
ನಡೆದಿದೆ. ಇದೀಗ ಮಹಿಳೆಯರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅರಣ್ಯ ಇಲಾಖೆ ಧಾರವಾಡ ವಿಭಾಗದ ಉಪ ಅರಣ್ಯ ಸಂರಕ್ಷಾಣಾಧಿಕಾರಿ ಯಶಪಾಲ್ ಕ್ಷೀರಸಾಗರ,ಸಾರ್ವಜನಿಕ ದೂರಿನ ಮೇರಿಗೆ ಅಗತ್ಯ ಕ್ರಮವಹಿಸಲಾಗಿದೆ. ಇಂದು ರಾತ್ರಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ತಂಡಗಳು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದರು.

ಧಾರವಾಡ ಗ್ರಾಮೀಣ ಶಾಸಕರೊಂದಿಗೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಅವರಿಂದ ದಾಳಿ ಮಾಡಿರುವ ಕಾಡು ಪ್ರಾಣಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಕೆಲವರು ದಾಳಿ ಮಾಡಿರುವ ಪ್ರಾಣಿ ಚಿರತೆ ಎಂದು ಅಪಪ್ರಚಾರ ಮಾಡುತ್ತಿದ್ದು, ಅದು ಚಿರತೆ ಅಥವಾ ತೋಳ ಅಥವಾ ಮತ್ಯಾವುದು ಕಾಡುಪ್ರಾಣಿ ಎಂಬುದು ಕಾರ್ಯಾಚರಣೆ ನಂತರ ಖಚಿತವಾಗಲಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ರಾತ್ರಿ ವೇಳೆಯಲ್ಲಿ ಅನಾವಶ್ಯಕವಾಗಿ ಸಾರ್ವಜನಿಕರು ಒಬ್ಬರು ಹೊರಗಡೆ ಓಡಾಡಿ ಬೇಡಿ ಎಂದು ಸಲಹೆ ನೀಡಿದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *