Breaking News

ಹಿಜಾಬ್‌ ಧರಿಸುವುದ ಕುರಿತು ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿಗಳು


ಉಡುಪಿ: ಉಡುಪಿ ಸರಕಾರಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಧರಿಸುವುದನ್ನು ನಿರಾಕರಿಸಿದ ವಿಷಯ ಹೈಕೋರ್ಟ್‌ ಮೆಟ್ಟಿಲೇರಿದೆ.

ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಅರ್ಜಿ ಸಲ್ಲಿಸಿದ್ದು, ಹಿಜಾಬ್‌ ಧರಿಸುವುದು ಸಂವಿಧಾನದ ಕಲಂ 14 ಮತ್ತು 25ರ ಅನ್ವಯ ಮೂಲಭೂತ ಹಕ್ಕು ಎಂದು ಅರ್ಜಿಯಲ್ಲಿ ಪ್ರತಿಪಾದಿಸಿದ್ದಾಳೆ.

ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಸರಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಿಜಾಬ್‌ ಧರಿಸಲಾಗುತ್ತಿದೆ ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸಲಾಗುತ್ತಿದೆ. ಅವರಿಗೆ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *