ಧಾರವಾಡ: ಜಿಲ್ಲಾವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅಗೌರವ ತೋರಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವನ ಮೇಲೆ ಎಸ್.ಸಿ/ಎಸ್.ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವನನ್ನು ದೇಶದಿಂದ ತಡಿಪಾರ ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು.
ಕಲಾಭವನದಿಂದ ಆರಂಭಗೊಂಡ ಮೆರವಣಿಗೆ ಶಾಸಕ ಪ್ರಸಾದ ಅಬ್ಬಯ್ಯ ಚಾಲನೆ ನೀಡಿದರು. ಡಿಎಸ್.ಎಸ್ ಮುಖಂಡರಾದ ಪರಮೇಶ್ವರ ಕಾಳೆ, ರಾಜು ಕೋಟೆನ್ನವರ, ಲಕ್ಷ್ಮಣ ದೊಡ್ಡಮನಿ ಸೇರಿದಂತೆ ಹಲವಾರು ಪಾಲ್ಗೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

