ಧಾರವಾಡ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಇಂದು (ಫೆ.1) ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಬೆಳಿಗ್ಗೆ ಶ್ರೀ ಮಡಿವಾಳ ಮಾಚಿದೇವರ ಜಯಂತಿಯನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಶ್ರೀ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪಣೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಮಡಿವಾಳರ ಸಂಘದಿಂದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪುರುಷೋತ್ತಮ, ಮಹಾನಗರ ಪಾಲಿಕೆಯ ಸದಸ್ಯರಾದ ಶಂಕರ ಶೆಳಕೆ, ಅನಿತಾ ಚಳಗೇರಿ ಹಾಗೂ ಆನಂದ ಜಾದವ, ಬಾಬಣ್ಣ ಮಡಿವಾಳರ, ಮಲ್ಲಿಕಾರ್ಜುನ ಹಂಗರಕಿ, ಬಸವರಾಜ ಬಳಗಿ, ಯಲ್ಲಪ್ಪ ಬೆಂಡಿಗೇರಿ, ಸಿದ್ದು ಪರಿಟ, ಶಿವು ಮಡಿವಾಳ ಸೇರಿದಂತೆ ಸಮಾಜದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು, ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

