Breaking News

ಬಜೆಟ್ 2022 : ಶಿಕ್ಷಣ ಕುರಿತು ಮಹತ್ವದ ಹೆಜ್ಜೆ

ನವದೆಹಲಿ: ಕೇಂದ್ರ ಬಜೆಟ್ 2022ರ ಮಂಡನೆ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಘೋಷಣೆ ಮಾಡಿದ್ದು, ಉದ್ಯೋಗ ಸೃಷ್ಟಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಮಹತ್ವ ನೀಡಿದ್ದಾರೆ.

ಆತ್ಮನಿರ್ಭರ್‌ಗೆ ಹೆಚ್ಚು ಒತ್ತು ನೀಡಿದ್ದು, 25 ವರ್ಷಗಳ ಬ್ಲೂಪ್ರಿಂಟ್ ತಯಾರು ಮಾಡಿರುವ ಬಗ್ಗೆ ವಿವರಣೆ ನೀಡಿದ್ದಾರೆ. ಜೊತೆಗೆ ಆಂತರಿಕವಾಗಿ 30 ಲಕ್ಷ ಉದ್ಯೋಗ ಸೃಷ್ಟಿ ಮಾಡುವ ಭರವಸೆ ನೀಡಿದ್ದಾರೆ.

ಈ ವರ್ಷದ ಬಜೆಟ್ ಶಿಕ್ಷಣ ಕ್ಷೇತ್ರಕ್ಕೂ ಕೆಲವು ಪ್ರಮುಖ ಘೋಷಣೆಗಳನ್ನು ಹೊಂದಿದೆ. ಡಿಜಿಟಲ್ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವುದು ಮತ್ತು ಪೂರಕ ಶಿಕ್ಷಣಕ್ಕಾಗಿ ‘ಒಂದು ವರ್ಗ ಒಂದು ಟಿವಿ ಚಾನೆಲ್’ ಕಾರ್ಯಕ್ರಮ ಘೋಷಣೆ ಮಾಡಲಾಗಿದೆ.

ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಡಿಜಿಟಲ್ ವಿಶ್ವವಿದ್ಯಾಲಯ ಬಹುದೊಡ್ಡ ನಿರ್ಧಾರವಾಗಿದ್ದು ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರಿಯ ಗುಣಮಟ್ಟದ ಶಿಕ್ಷಣ ನೀಡಲು ಈ ಯೋಜನೆ ತರಲಾಗಿದೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಈ ಯೋಜನೆಯಲ್ಲಿ ಕೈಜೋಡಿಸಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಮಾಹಿತಿ ನೀಡಿದ್ದಾರೆ.

Share News

About admin

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *