Breaking News

ಶಿಥಿಲಗೊಂಡಿದ್ದ ಪಾಲಿಕೆ ಕಟ್ಟಡ ತೆರವು ಕಾರ್ಯಾಚರಣೆ

ಹುಬ್ಬಳ್ಳಿ: ನಗರದ ಬ್ರಾಡ್‌ವೇನಲ್ಲಿರುವ ಮಹಾನಗರ ಪಾಲಿಕೆ ಕಾಂಪ್ಲೆಕ್ಸ್‌ನ ಕಟ್ಟಡ ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ, ಇಂದು ಪಾಲಿಕೆ ಪಾಲಿಕೆ ಅಧಿಕಾರಿಗಳು ಪೊಲೀಸ್ ಬಿಗಿ ಭದ್ರತೆಯೊಂದಿಗೆ ತೆರವು ಕಾರ್ಯಾಚರಣೆ ನಡೆಸಿದರು.

ಶಿಥಿಲಗೊಂಡಿರುವ ಕಟ್ಟಡದಲ್ಲಿ ಮಳಿಗೆಗಳನ್ನು ತೆರವುಗೊಳಿಸಲು ಹಲವು ಬಾರಿ ನೋಟಿಸ್ ನೀಡಲಾಗಿತ್ತು. ಆದರೂ ಬಾಡಿಗೆದಾರರು ಕಟ್ಟಡ ತೊರೆಯಲು ಮುಂದಾಗದ ಕಾರಣ, ಇಂದು ಮುಂಜಾನೆಯಿಂದಲೇ ಪಾಲಿಕೆ ಸಿಬ್ಬಂದಿ ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ತೆರವು ಕಾರ್ಯಾಚರಣೆ ನಡೆಸಿದರು. ಕಟ್ಟಡದಲ್ಲಿರುವ ಅಂಗಡಿಕಾರರಿಗೆ ತಮ್ಮ ವಸ್ತುಗಳನ್ನು ಹೊರತೆಗೆಯಲು 30 ನಿಮಿಷ ಅವಕಾಶ ನೀಡಲಾಗಿತ್ತು. ಆದರೆ ಅಂಗಡಿಕಾರರು ವಸ್ತುಗಳನ್ನುಧ ಹೊರತರದ ಕಾರಣ, ಸ್ವತಃ ಪಾಲಿಕೆ ಸಿಬ್ಬಂದಿಗಳು ಅಂಗಡಿಗಳಲ್ಲಿದ್ದ ಎಲ್ಲ ಸರಕುಗಳನ್ನು ಹೊರ ಹಾಕಿ ತೆರವು ಕಾರ್ಯಾಚರಣೆ ಮುಂದುವರೆಸಿದ್ದಾರೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *