ಬಳ್ಳಾರಿ: ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಒಬ್ಬ ಪ್ರಾಮಾಣಿಕ ಅಧಿಕಾರಿ ಅಂತ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ, ಚನ್ನಣ್ಣನವರು ಮೇಲೆ ಬಂದಿರುವ ಆರೋಪ ಶುದ್ಧ ಸುಳ್ಳು ಅಂತ ಹೇಳಿದರು.
ಇನ್ನೂ ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ರಾಜ್ಯದಲ್ಲಿ ಯುವಕರಿಗೆ ಮಾದರಿಯಾದ ವ್ಯಕ್ತಿ ರವಿ ಡಿ.ಚನ್ನಣ್ಣನವರ್ ಆಗಿದ್ದು, ಅವರನ್ನು ಲಕ್ಷಾಂತರ ಜನರು ಮೆಚ್ಚಿದ್ದಾರೆ. ಭ್ರಷ್ಟಾಚಾರದ ಆರೋಪಗಳು ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರನ್ನು ಬಿಟಿಲ್ಲ, ಹೀಗಾಗಿ ಅವರ ಮೇಲೆ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಅವರು ಕಾನೂನು ಹೋರಾಟದ ಮೂಲಕ ಗೆದ್ದ ಬರಲಿದ್ದಾರೆ ಎನ್ನುವ ವಿಶ್ವಾಸ ನನಗಿದೆ ಅಂತ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

