Breaking News

ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

ರಾಯಚೂರು: ತಾಯಿಯೊಬ್ಬರು ಬೆಂಕಿ‌ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಬೆಂಕಿ ಅವರ ಮಗಳಿಗೂ ತಗುಲಿದ ಪರಿಣಾಮ ಇಬ್ಬರೂ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದೆ.

ಜೀವನದಲ್ಲಿ ಜಿಗುಪ್ಸೆಗೊಂಡಿದ್ದು, ಇಂತಹ ನಿರ್ಧಾರ ತೆಗೆದುಳ್ಳಲಾಗಿದೆ ಎನ್ನಲಾಗಿದೆ.  ಶಿರಿಷಾ (35), ಭುವನ (6) ಮೃತ ಅಮ್ಮ-ಮಗಳು. ಕಳೆದ 11 ವರ್ಷಗಳ ಹಿಂದೆ ಶಿವಪ್ರಸಾದ್ ಎನ್ನುವರ ಜೊತೆ ಶಿರಿಷಾ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಇತ್ತೀಚಿಗೆ ಯಾವುದೋ ವಿಷಯವನ್ನ ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಶಿರಿಷಾ ಬೆಂಕಿ ಹಚ್ಚಿಕೊಂಡಿದ್ದಾರೆ.

ದುರಾದೃಷ್ಟವಶಾತ್​ ಇಬ್ಬರೂ ಮೃತಪಟ್ಟಿದ್ದಾರೆ. ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *