ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ 2022-23ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದರು. ಈ ಕುರಿತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರದ ಆತ್ಮನಿರ್ಭರ ಬಜೆಟ್‌ನಲ್ಲಿ ವಿವಿಧ ಘೋಷಣೆಗಳೊಂದಿಗೆ ಕರ್ನಾಟಕದ ಅಭಿವೃದ್ಧಿ ಚಟುವಟಿಕೆಗಳು ಭಾರಿ ಉತ್ತೇಜನವನ್ನು ಪಡೆಯುತ್ತವೆ ಮತ್ತು ಹಂಚಿಕೆ ಮಾಡಲಾದ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯನ್ನು ಖಚಿತಪಡಿಸಿಕೊಳ್ಳಲು ನಾವು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ನಮ್ಮ ಸರ್ಕಾರದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಧ್ಯೇಯವಾಕ್ಯವನ್ನು ಅಂತರ್ಗತ ಮಾಡಿಕೊಂಡು ಆತ್ಮನಿರ್ಭರ ಬಜೆಟ್ ಮಂಡಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

