ಮುದ್ದೇಬಿಹಾಳ : 3 ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ತಂಗಡಗಿ ಗ್ರಾಮದ ಬಸವರಾಜ (28) ಚಿಕಿತ್ಸೆ ಫಲಿಸದೆ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ.
ಇವರು ಸೇವೆಗೆ ಸೇರಿ 8-10 ವರ್ಷಗಳಾಗಿದ್ದು ಪ್ರಸ್ತುತ ಬಿಹಾರ ರಾಜ್ಯದಲ್ಲಿ ಕರ್ತವ್ಯದಲ್ಲಿದ್ದು ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಾಗ ಆಲಮಟ್ಟಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ನಡೆದಿತ್ತು. ಮೃತರಿಗೆ ಪತ್ನಿ, ಎರಡು ಗಂಡು ಮಕ್ಕಳು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

