Breaking News

ನ್ಯಾಯಾಧೀಶರು ಮಲ್ಲಿಕಾರ್ಜುನಗೌಡ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ : ಗಣರಾಜ್ಯೋತ್ಸವ ದಿನದಂದು ಡಾ. ಬಿ.ಆರ್
ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ರಾಯಚೂರಿನ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಹಾಗೂ ರಾಜ್ಯದ ಸಕಲ ನ್ಯಾಯಾಲಯಗಳಲ್ಲಿ ಡಾ. ಬಿ.ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಬೇಕೆಂದು ಆಗ್ರಹಿಸಿ ನಗರದ ತಹಶಿಲ್ದಾರ ಕಚೇರಿ ಬಳಿ ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳ ವತಿಯಿಂದ  ತಹಶಿಲ್ದಾರರ ಮುಖಾಂತರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಲಾಯಿತು.

ನಗರದ ಮುಖ್ಯ ಅಂಚೆ ಕಛೇರಿ ಬಳಿಯಿರುವ ಡಾ. ಅಂಬೇಡ್ಕರ್ ಪ್ರತಿಮೆ ಆವರಣದಿಂದ ತಹಶಿಲ್ದಾರ‌ ಕಛೇರಿವರೆಗೆ  ಪ್ರತಿಭಟನಾ ರ್ಯಾಲಿ ಮುಖಾಂತರ ಪ್ರತಿಭಟನಾಕಾರರು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಸಮತಾಸೇನಾ ರಾಜ್ಯಾಧ್ಯಕ್ಷ ಗುರುನಾಥ ಉಳ್ಳಿಕಾಶಿ ಮಾತನಾಡಿ, ಜನವರಿ ೨೬ ರಿಂದ  ನಿರಂತರವಾಗಿ ಹೋರಾಟ ನಡೆಸುತ್ತಿದ್ದೇವೆ.
ರಾಜ್ಯ ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದನ್ನು ನೋಡಿದರೇ ಮಲ್ಲಿಕಾರ್ಜುನಗೌಡ ಅವರನ್ನು ಸರ್ಕಾರವೇ
ಮುಂದು ಬಿಟ್ಟಿದಿಯಾ ಎಂಬ ಸಂಶಯ ಜನರಲ್ಲಿ ಮೂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಥಮ ಹಂತದ ಪ್ರತಿಭಟನೆ ಇದಾಗಿದ್ದು, ೩೦ ದಿನಗಳಲ್ಲಿ ರಾಜ್ಯ ಸರ್ಕಾರ  ಕಾನೂನು ಕ್ರಮ ಕೈಗೊಳಬೇಕು ಹಾಗೂ ಸಕಲ ನ್ಯಾಯಾಲಯಗಳಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರವಿಡಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.     ಈ ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರವಾದ ಹೋರಾಟಕ್ಕೆ ಅಣಿಯಾಗಲಿದ್ದೇವೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಶಾಸಕರಾದ ಪ್ರಸಾದ್ ಅಬ್ಬಯ್ಯ, ಅಲ್ತಾಪ್ ಹಳ್ಳೂರ,  ಅಲ್ತಾಪ್ ನವಾಜ್ ಎಂ. ಕಿತ್ತೂರ,    ಪ್ರೇಮನಾಥ ಚಿಕ್ಕತುಂಬಳ, ಚಂದ್ರಶೇಖರ್ ಗೋಕಾಕ್, ವೀರಭದ್ರಪ್ಪ ಹಾಲಹರವಿ ಸೇರಿದಂತೆ ನೂರಾರು ದಲಿತ ಮುಖಂಡರು ಭಾಗಿಯಾಗಿದ್ದರು

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *