ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6 ರಿಂದ 8 ನೇ ತರಗತಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಆರ್. ವಿಶಾಲ್ ಅವರು ಡಿಡಿಪಿಐಗಳಿಗೆ ಈ ಸಂಬಂಧ ಸೂಚನೆ ನೀಡಿದ್ದು, ಕಲ್ಯಾಣ ಕರ್ನಾಟಕದ 6 ಶೈಕ್ಷಣಿಕ ಜಿಲ್ಲೆಗಳ ಶಾಲೆಗಳಿಗೆ ಒಟ್ಟು 5000 ಹುದ್ದೆಗಳು ಹಾಗೂ ಉಳಿದ 28 ಜಿಲ್ಲೆಗಳಿಗೆ 10,000 ಸೇರಿ 15 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗೆ ಆದೇಶವನ್ನು ಕಾಯ್ದಿರಿಸಿ, ಡಿಡಿಪಿಐಗಳ ಹಂತದಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಅಗತ್ಯ ಪೂರ್ವ ಸಿದ್ಧತೆಗಳಿಗೆ ಕ್ರಮ ವಹಿಸಲು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

