ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಯಾದಗಿರಿ ಮೂಲದ ಹನುಮಂತು (23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹನುಮಂತುಗೆ ಕಿಡ್ನಿ ಫೇಲ್ಯೂರ್ ಆಗಿತ್ತು.ಇದರಿಂದ ಮನನೊಂದು ಯಶವಂತಪುರದ ಕೊಲಂಬಿಯಾ ಆಸ್ಪತ್ರೆ ಬಳಿಯ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಯುವಕನ ತಂದೆ-ತಾಯಿ ಬಿಬಿಎಂಪಿಯಲ್ಲಿ ಕೂಲಿ ಕಾರ್ಮಿಕರಾಗಿದ್ದರು. ಹನುಮಂತನಿಗೆ ಚಿಕಿತ್ಸೆ ಕೊಡಿಸಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

